ಬಳ್ಳಾರಿ : ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ನಡೆದಿದೆ. ಕುರುವಳ್ಳಿ ಗ್ರಾಮದ ಶಿವಲಿಂಗಮ್ಮ (18), ಅಭಿ (18)ಇಬ್ಬರು ಪದವಿ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿ ಶಿವಲಿಂಗಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ ಪದವಿ ಪರೀಕ್ಷೆ ಮುಗಿಸಿಕೊಂಡು, ಡಿಪ್ಲೋಮ ವಿದ್ಯಾರ್ಥಿ ಅಭಿ ಜೊತೆಗೆ ಬೈಕ್ ನಲ್ಲಿ ತೆರಳುವ ಸಮಯದಲ್ಲಿ ಘಟನೆ ನಡೆದಿದೆ. ಈ ಕುರಿತು ಸಿರಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
27/01/2026 06:53 pm
LOADING...