ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ವಸತಿ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉನ್ನತ ಅಧಿಕಾರಿಗಳ ದೌಡು, ಪರಿಶೀಲನೆ!

ಶಿವಮೊಗ್ಗ : ನಗರದ ರಾಗಿಗುಡ್ಡ ಪ್ರದೇಶದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಶಾಲೆಯಲ್ಲಿರುವ 14 ವಿದ್ಯಾರ್ಥಿನಿಯರಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಕೆಮ್ಮು ತೀವ್ರಗೊಂಡ ಕಾರಣ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 6 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ವಸತಿ ಶಾಲೆಯ ವಾರ್ಡನ್ ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದಾರೆ. ಇದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆ ಆಗಿದ್ದು, ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಹೆಚ್ಚಿನ ತನಿಖೆ ಮತ್ತು ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಂಡಿದೆ.

Edited By : Shivu K
PublicNext

PublicNext

27/01/2026 09:51 pm

Cinque Terre

19.68 K

Cinque Terre

0

ಸಂಬಂಧಿತ ಸುದ್ದಿ