ಹಾವೇರಿ: ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಂತ್ರೋಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 14 ಟ್ರಾಕ್ಟರ್ ಲೋಡ್ ಮೆಕ್ಕೆಜೋಳ ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.
ಅಪಾರ ನಷ್ಟ
ನಿಂಗಪ್ಪ ಬಸಪ್ಪ ಯಲವಿಗಿ ಮತ್ತು ಸಿದ್ದಪ್ಪ ಮುಗಳಿ ಎಂಬುವರಿಗೆ ಸೇರಿದ ಈ ಮೆಕ್ಕೆಜೋಳ ಬೆಂಕಿಗಾಹುತಿಯಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳದ ಕಾರ್ಯಾಚರಣೆ ಮತ್ತು ಪ್ರಕರಣ
ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತರ ದುಃಖ
ಕೈಗೆ ಬಂದ ಫಸಲು ಬೆಂಕಿಗಾಹುತಿಯಾದ ಹಿನ್ನೆಲೆಯಲ್ಲಿ ರೈತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ" ಎಂದು ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.
Kshetra Samachara
28/01/2026 10:59 am
LOADING...