ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ : ವಾಹನ ಡಿಕ್ಕಿಯಾಗಿ ಕರಡಿ ಸಾವು

ಕೂಡ್ಲಿಗಿ : ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಕರಡಿ ಮೃತಪಟ್ಟಿದೆ. ಆಹಾರ ಅರಸಿ ಹೆದ್ದಾರಿ ದಾಟಿ ಹೋಗುತ್ತಿದ್ದ ಕರಡಿಗೆ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ 8 ವರ್ಷದ ಗಂಡು ಕರಡಿ ತೀವ್ರವಾಗಿ ಗಾಯಗೊಂಡು ಪಕ್ಕದ ಹೊಲದಲ್ಲಿ ಹೋಗಿ ಬಿದ್ದಿತ್ತು.

ಈ ವಿಷಯ ತಿಳಿದ ಕೂಡ್ಲಿಗಿ ವಲಯ ಅರಣ್ಯ ಅಧಿಕಾರಿ ಸಂದೀಪ್ ನಾಯಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲಿಸಿ ಚಿಕಿತ್ಸೆ ಕೊಡಿಸಲು ಸಿದ್ಧತೆ ನಡೆಸಿದ್ದರು. ಆದರೆ ಕರಡಿ ಮೃತಪಟ್ಟಿದೆ. ಪಶು ವೈದ್ಯಾಧಿಕಾರಿ ಡಾ. ಲೋಹಿತ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಇಲಾಖೆಯ ನಿಯಮಗಳಂತೆ ಕರಡಿಯನ್ನು ಅಂತ್ಯಕ್ರಿಯೆ ನಡೆಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

28/01/2026 11:25 am

Cinque Terre

7.28 K

Cinque Terre

0

ಸಂಬಂಧಿತ ಸುದ್ದಿ