ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಫ್‌ಡಿ ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

ಶಿವಮೊಗ್ಗ : ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್ ಡಿ) ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಯುವಕ ಜನವರಿ 20 ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿಲ್ಲ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವಕ ಕೊನೆಯುಸಿರೆಳೆದಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Edited By :
Kshetra Samachara

Kshetra Samachara

28/01/2026 12:08 pm

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ