ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಶಾಲೆಗೆ ದಾನ ನೀಡಿದ 50 ಎಕರೆ ಜಮೀನು ಕಬಳಿಕೆ: ಸಂಸದ ಡಾ.ಕೆ.ಸುಧಾಕರ್‌

ಕೋಲಾರ - ಮಾಲೂರು ತಾಲ್ಲೂಕು ಟೇಕಲ್‌ ಹೋಬಳಿಯ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ದಾನ ನೀಡಿದ್ದ ಸುಮಾರು 50 ಎಕರೆ ಜಮೀನನ್ನು ಎರಡು ಸಂಸ್ಥೆಗಳು ಕಬಳಿಸಿವೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಂಡು, ಜಮೀನು ವಾಪಸ್‌ ಪಡೆಯಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ನಗರ ಹೊರವಲಯದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಟಿ.ಜಿ.ಶ್ರೀನಿವಾಸುಲು ಎಂಬುವರು 1955ರಲ್ಲಿ ಅಗಲಕೋಟೆ ಗ್ರಾಮದ ಸರ್ವೆ ನಂಬರ್‌ 2, 7, 8, 10, 18, 60, 61, 63, 64 ರ 50 ಎಕರೆ 26 ಗುಂಟೆ ಖುಷ್ಕಿ ಜಮೀನನ್ನು ಶಿಕ್ಷಣ ಇಲಾಖೆಗೆ ದಾನ ಮಾಡಿದ್ದರು. ದಾನಪತ್ರದ ಮೂಲಕ ನೋಂದಣಿ ಮಾಡಿಸಿ ಶಾಲೆಗೆ ನೀಡಿದ್ದರು. ಆದರೆ, ನಕಲಿ ದಾಖಲೆ ಸೃಷ್ಟಿಸಿ ಆ ಜಮೀನನ್ನು ಕಬಳಿಸಲಾಗಿದೆ. ಈ ಭಾಗದಲ್ಲಿ ಒಂದೊಂದು ಎಕರೆ 1 ಕೋಟಿ ಬೆಲೆ ಬಾಳುತ್ತಿದ್ದು, ಈ ಜಮೀನಿನ ಒಟ್ಟು ಮೌಲ್ಯ ಅಂದಾಜು 50 ಕೋಟಿ' ಎಂದರು.

Edited By : PublicNext Desk
Kshetra Samachara

Kshetra Samachara

28/01/2026 02:12 pm

Cinque Terre

380

Cinque Terre

0

ಸಂಬಂಧಿತ ಸುದ್ದಿ