ಯಾದಗಿರಿ: ಬಿಸಿಲಿನ ಬೇಗೆ ತಣಿಸಿಕೊಳ್ಳಲು ಹೋದ ಯುವಕನೊಬ್ಬ ವಿಧಿಯಾಟಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆ ಸುರಪುರ ತಾಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಯಾಳಗಿ ಗ್ರಾಮದ ನಿವಾಸಿ ರಮೇಶ್ ನಿಂಗಪ್ಪ ಕಟಿಕಾರ (30) ಮೃತಪಟ್ಟ ದುರ್ದೈವಿ. ಕಾಲುವೆಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ರಮೇಶ್ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
PublicNext
28/01/2026 03:58 pm
LOADING...