ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಸರವು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ: ಡಾ. ಕುಮಾರ್

ಮಂಡ್ಯ : ಮನೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಕಸ ವಿಂಗಡಣೆ ಆಗಬೇಕು. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಬಹಳ ಅಗತ್ಯವಾಗಿದ್ದು ಮನೆಮನೆಯಲ್ಲಿ ಜಾಗೃತಿ ಮೂಡಿಸಿ ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ತಿಳಿಸುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಹೇಳಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಅಭಿಯಾನ 2025-26 ವಿಷಯದ ಕುರಿತು ತರಬೇತಿ ಕಾರ್ಯಾಗಾರವನ್ನು ನಗರಸಭೆಯ ಧಾರಣಪ್ಪ ಸಭಾಂಗಣದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ನಗರ ಮತ್ತು ಪರಿಸರವನ್ನು ಸ್ವಚ್ಛ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ರವರು ಹೇಳಿದರು.

ನಗರದ ಅಭಿವೃದ್ಧಿ ಸಮಾಜದ ಅಭಿವೃದ್ಧಿ ಜೊತೆಗೆ ಪರಿಸರ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರ ಹೆಚ್ಚು ಆಗಬೇಕು.

ಸ್ವಚ್ಛ ಭಾರತ್ ಮಿಷನ್‌ನ ಅಧಿಕಾರಿಗಳ ಕಾರ್ಯ ವೈಖರಿ, ಪ್ರಯತ್ನ, ಪರಿಶ್ರಮ, ಬಹಳ ಮುಖ್ಯ. ಸ್ವಚ್ಛ ಭಾರತ್ ಮಿಷನ್ (ನಗರ ) 2.0 ಯೋಜನೆಯಡಿಯಲ್ಲಿ ಬರುವ ಮಾನದಂಡಗಳು ಮತ್ತು ಸೂಚನೆಗಳನ್ನು ಪಾಲಿಸುವ ಮೂಲಕ ನಗರಕ್ಕೆ ಒಳ್ಳೆಯ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ನಗರ ಸಭೆಯ ಪೌರಾಯುಕ್ತರಾದ ಪಂಪ ಶ್ರೀ,‌ಪರಿಸರ ವಿಭಾಗದ ಅಭಿಯಂತರರಾದ ರುದ್ರೇಗೌಡ, ಸಹಾಯಕ ಅಭಿಯಂತರರಾದ ಪ್ರತಾಪ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/01/2026 07:09 pm

Cinque Terre

2.26 K

Cinque Terre

0