ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೌಟುಂಬಿಕ ಕಲಹದ ಕ್ರೂರ ಅಂತ್ಯ : ಮಾವನಿಂದಲೇ ಸೊಸೆಯ ಕೊಲೆ!

ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆ ಸೊಸೆಯನ್ನೇ ಮಾವನೋರ್ವ ಕೊಲೆಗೈದ ದಾರುಣ ಘಟನೆ ನಡೆದಿದೆ. ರೇಖಾ ಎಂಬ 24 ವರ್ಷದ ದುರ್ದೈವಿಯೇ ಮಾವನಿಂದ ಕೊಲೆಯಾದ ಮಹಿಳೆಯಾಗಿದ್ದಾಳೆ. ಸಿದ್ದಪ್ಪ ಎಂಬಾತನೇ ಕೊಲೆಗೈದ ಆರೋಪಿಯಾಗಿದ್ದು, ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಚಿಕ್ಕ ಹಣಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಡಿವೈಎಸ್ಪಿ ಚಂದ್ರಶೇಖರ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಸಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

29/01/2026 07:59 am

Cinque Terre

1.34 K

Cinque Terre

0