ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಬೆಳ್ಳಂಬೆಳಗ್ಗೆ ವೃದ್ಧನ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಬೆಳಗಾವಿ ಜಿಲ್ಲೆಯಲ್ಲಿ ನಾಯಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಇದೀಗ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ವೃದ್ಧರೊಬ್ಬರ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ.

ಗ್ರಾಮದ ನಿವಾಸಿ ನಾಗಪ್ಪಾ ಕೆಳಗೇರಿ ತಮ್ಮ ಮನೆಗೆ ತೆರಳುತ್ತಿದ್ದಾಗ ಅನಿರೀಕ್ಷಿತವಾಗಿ ಸಾಕು ನಾಯಿಯೊಂದು ಅವರ ಮೇಲೆ ಎರಗಿ ಕಚ್ಚಿದೆ. ಈ ದಾಳಿಯಿಂದ ನಾಗಪ್ಪಾ ಕೆಳಗೇರಿ ಅವರಿಗೆ ಗಂಭೀರ ಗಾಯಗಳಾಗಿವೆ.

ನಾಯಿ ದಾಳಿಯಿಂದ ಗಾಯಗೊಂಡ ವೃದ್ಧ ನಾಗಪ್ಪಾ ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By : Vinayak Patil
Kshetra Samachara

Kshetra Samachara

29/01/2026 11:33 am

Cinque Terre

14.08 K

Cinque Terre

0

ಸಂಬಂಧಿತ ಸುದ್ದಿ