ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮುಖಭಂಗ - ನರಸಾಪುರದಲ್ಲಿ ಕಾಂಗ್ರೆಸ್ ಪಾರುಪತ್ಯ !

ಕೋಲಾರ : ತಾಲ್ಲೂಕಿನ ನರಸಾಪುರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳಿಗೆ ನಿರಾಸೆ ಆಗಿದೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು ನೇತೃತ್ವದ ತಂಡ ಗೆದ್ದಿದೆ. ಒಟ್ಟು 12 ಸ್ಥಾನಗಳ ಪೈಕಿ 11 ಸ್ಥಾನ ಕಾಂಗ್ರೆಸ್‌ ಬೆಂಬಲಿತರ ಪಾಲಾಗಿವೆ.

ಏಕೈಕ ಸ್ಥಾನವನ್ನು ಮೈತ್ರಿಕೂಟ ಗೆದ್ದಿದೆ. ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಬೆಂಬಲಿತರು ಹಾಗೂ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Edited By : PublicNext Desk
PublicNext

PublicNext

29/01/2026 12:47 pm

Cinque Terre

5.84 K

Cinque Terre

0

ಸಂಬಂಧಿತ ಸುದ್ದಿ