ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಪದೇಪದೇ ತೊಂದರೆ, ಪ್ರಕರಣ ದಾಖಲು: ಅರಣ್ಯ ಅಧಿಕಾರಿಗಳಿಂದ ಕಿರುಕುಳ ಆರೋಪ

ಕೋಲಾರ - ಅರಣ್ಯ ಇಲಾಖೆಯ ಕಿರುಕುಳದಿಂದ ಭೂಮಿ ಕಳೆದುಕೊಂಡಿರುವ ಜಿಲ್ಲೆಯ ರೈತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಭೂ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ಕೆಪಿಆರ್‌ಎಸ್‌ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಹಾಕಿ, ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯ ಮಾಡಿದರು. ರೈತರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಬಾರದೆಂದು ಸಭೆಯಲ್ಲಿ ನಿರ್ಣಯ ಕೈಗೊಂಡಿ‌ದ್ದರೂ ಪದೇಪದೇ ತೊಂದರೆ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು.

Edited By : PublicNext Desk
Kshetra Samachara

Kshetra Samachara

29/01/2026 12:49 pm

Cinque Terre

300

Cinque Terre

0

ಸಂಬಂಧಿತ ಸುದ್ದಿ