ಚಾಮರಾಜನಗರ : ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಮ್ಮ ಕನ್ನಡಿಗರ ವಿಜಯಸೇನೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೆರವಣಿಗೆ ಮೂಲಕ ಆಕ್ರೋಶ
ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇಗುಲದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಅಕ್ರಮ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಅಲ್ಲಿಂದ ಮೆರವಣಿಗೆ ಹೊರಟು ಬಿ. ರಾಜಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಮನವಿ ಸಲ್ಲಿಸಿದರು.
ಶೇ. 70ರಷ್ಟು ಶಾಲೆಗಳು ಅಕ್ರಮ : ಕಠಿಣ ಕ್ರಮಕ್ಕೆ ಆಗ್ರಹ
ಖಾಸಗಿ ಶಾಲೆಗಳನ್ನು ನಡೆಸಲು ಅಗತ್ಯವಿರುವ ಭೂ ಪರಿವರ್ತನೆ, ಅಗ್ನಿಶಾಮಕದಳದ ಅನುಮತಿಗಳನ್ನು ಪಡೆಯದೆ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಶೇ. 70 ರಷ್ಟು ಶಾಲೆಗಳ ವಿರುದ್ಧ ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದವರು
ಈ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಂಜುನಾಯಕ, ಕಾರ್ಯದರ್ಶಿ ಕೆಲ್ಲಂಬಳ್ಳಿ ಶಿವು, ಹರದನಹಳ್ಳಿ ಗ್ರಾಮದ ಚಂದ್ರಶೇಖರ್, ಕೃಷ್ಣ, ಶಿವರಾಜ್ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
PublicNext
29/01/2026 05:41 pm
LOADING...