ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಶ್ರೀರಾಮನಗರದಲ್ಲಿ ಬೀದಿನಾಯಿ ಹಾವಳಿ ನಿಯಂತ್ರಣಕ್ಕೆ ಪಾಲಿಕೆ ಆಯುಕ್ತರಿಗೆ ಮನವಿ

ತುಮಕೂರು : ನಗರದ ಶ್ರೀರಾಮನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ದಿನನಿತ್ಯ ನಾಯಿಗಳಿಂದ ಒಂದಲ್ಲೊಂದು ಸಮಸ್ಯೆ ಉಂಟಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಗರ ಮಂಡಲ ಉಪಾಧ್ಯಕ್ಷ ಬಂಬೂ ಮೋಹನ್ ಹಾಗೂ ಸ್ಥಳೀಯ ನಿವಾಸಿಗಳು ನಗರಪಾಲಿಕೆ ಆಯುಕ್ತೆ ಶುಭಾ ಅವರಿಗೆ ಮನವಿ ಪತ್ರ ಮಾಡಿದರು.

ಶ್ರೀರಾಮನಗರದಲ್ಲಿ ಬೀದಿನಾಯಿಗಳ ಉಪಟಳ ಮಿತಿಮೀರಿದೆ. ಮಕ್ಕಳು, ವಯೋವೃದ್ಧರು ರಸ್ತೆಯಲ್ಲಿ ಓಡಾಡಲು ಹೆದರುವಂತಹ ಪರಿಸ್ಥಿತಿ ಇದೆ. ನಾಯಿಗಳು ಮಕ್ಕಳ ಮೇಲೆರಗಿ ದಾಳಿ ಮಾಡುತ್ತವೆ. ಅನೇಕರನ್ನು ಕಚ್ಚಿ ಗಾಯಗೊಳಿಸಿವೆ. ಮಕ್ಕಳು ಮನೆಬಿಟ್ಟು ಹೊರಗೆಬರಲು ಹೆದರುವಂತಾಗಿದೆ. ರಾತ್ರಿ ವೇಳೆ ಬೀದಿನಾಯಿಗಳು ಬೊಗುಳುವುದರಿಂದ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಬೀದಿನಾಯಿಗಳಿಂದಾಗಿ ನಿವಾಸಿಗಳಿಗೆ ಶಾಂತಿ, ನೆಮ್ಮದಿ ಇಲ್ಲದಂತಾಗಿದೆ ಎಂದು ಬಂಬೂ ಮೋಹನ್ ಪಾಲಿಕೆ ಆಯುಕ್ತರಿಗೆ ಮನವರಿಕೆ ಮಾಡಿದರು.

ಮನವಿಗೆ ಸ್ಪಂದಿಸಿದ ಆಯುಕ್ತರು, ಬೀದಿನಾಯಿಗಳ ಹಾವಳಿ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. 19 ನೇ ವಾರ್ಡ್ ಬಿಜೆಪಿ ಅಧ್ಯಕ್ಷ ಕಿರಣ್, ಮುಖಂಡರಾದ ಗಜ, ರಾಜಕುಮಾರ್, ಮಲ್ಲಪ್ಪ, ವಿನೋದ್ ಮೊದಲಾದವರು ಈ ವೇಳೆ ಹಾಜರಿದ್ದರು.

Edited By : PublicNext Desk
PublicNext

PublicNext

29/01/2026 05:49 pm

Cinque Terre

3.34 K

Cinque Terre

0