ಚಾಮರಾಜನಗರ : ಸೂಳ್ವಾಡಿ ವಿಷ ಪ್ರಸಾದ ಹಂಚಿ 17 ಮಂದಿ ಸಾವಿಗೆ ಕಾರಣರಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಾವಕಾಶ ನೀಡಬಾರದು ಹಾಗೂ ಮರಣ ದಂಡನೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಬೆಟ್ಟದಲ್ಲಿರುವ ಸಾಲೂರು ಮಠದ ಮುಂಭಾಗ ಸಂತ್ರಸ್ತ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.
ಹನೂರು ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಸೂಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ಕಳೆದ ಆರು ವರ್ಷಗಳ ಹಿಂದೆ ನಡೆದಿದ್ದ ವಿಷ ಮಿಶ್ರಿತ ಪ್ರಸಾದ ಹಂಚಿ 17 ಮಂದಿ ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇದೀಗ ಅನೇಕ ಮಂದಿ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಸಂತ್ರಸ್ತ ಕುಟುಂಬಸ್ಥರು ಸಾಲೂರು ಮಠದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಪ್ರಕರಣದ ಸಾಕ್ಷ್ಯ ನಾಶ ಪಡಿಸಬಹುದೆಂಬ ಶಂಕೆ ಇದ್ದು, ಅವರನ್ನು ಯಾವುದೇ ಕಾರಣಕ್ಕೂ ಮಹದೇಶ್ವರ ಬೆಟ್ಟಕ್ಕೆ ಬರಲು ಬಿಡಬಾರದು, ಹಾಗೂ ಆರೋಪಿಗೆ ಮರಣ ದಂಡನೆ ಶಿಕ್ಷೆಯಾಗಬೇಕೆಂದು ಸಂತ್ರಸ್ತ ಕುಟುಂಬಸ್ಥರು ಒತ್ತಾಯಿಸಿ, ಮಹದೇಶ್ವರ ಬೆಟ್ಟದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿದರು.
PublicNext
29/01/2026 06:14 pm
LOADING...