ಬಳ್ಳಾರಿ : ಮಟ್ಕಾ, ಇಸ್ಪೀಟ್, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಜನವರಿ 8ರಿಂದ ಇಲ್ಲಿಯ ವರೆಗೆ ಒಟ್ಟು 31 ಪ್ರಕರಣಗಳಲ್ಲಿ 97 ಮಂದಿಯನ್ನು ಬಂಧಿಸಿರುವುದಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ಮಾಹಿತಿ ನೀಡಿದ್ರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಟ್ಕಾಗೆ ಸಂಬಂಧಿಸಿದಂತೆ ವಿವಿಧ ಠಾಣೆಗಳಲ್ಲಿ ಒಟ್ಟು 14 ಪ್ರಕರಣ ದಾಖಲಾಗಿದ್ದು, 28 ಜನರನ್ನು ಬಂಧಿಸಲಾಗಿದೆ. ₹41,350 ಜಪ್ತಿ ಮಾಡಲಾಗಿದೆ ಅಂತ ಹೇಳಿದ್ರು.
ಇಸ್ಪೀಟ್‌ಗೆ ಸಂಬಂಧಿಸಿದಂತೆ 11 ಪ್ರಕರಣ ದಾಖಲಾಗಿದ್ದು, 63 ಜನರನ್ನು ದಸ್ತಗಿರಿ ಮಾಡಲಾಗಿದೆ. ₹67,360 ಜಪ್ತಿ ಮಾಡಿರುವುದಾಗಿದೆ. ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ 6 ಪ್ರಕರಣಗಳಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. 50 ಲೀಟರ್ ಹೆಂಡ, 11.34 ಲೀಟರ್ ಮದ್ಯ ಜಪ್ತಿ ಮಾಡಿದೆ. ಪಡಿತರ ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಜ. 25 ಮತ್ತು 26ರಂದು 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಒಟ್ಟು ₹2,57,340 ಮೌಲ್ಯದ 105 ಕ್ವಿಂಟಲ್ ಅಕ್ಕಿ ಮತ್ತು ಇತರ ಧಾನ್ಯಗಳನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ. ಈ ಎರಡೂ ಪ್ರಕರಣಗಳಿಂದ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.
ಇನ್ನು ಗಾಂಧಿನಗರ ಠಾಣೆ ವ್ಯಾಪ್ತಿಯಲ್ಲಿ 2024ರಲ್ಲಿ ನಡೆದಿದ್ದ ಎರಡು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದೆ. ಈ ಎರಡೂ ಪ್ರಕರಣಗಳಲ್ಲಿ ಒಟ್ಟು ₹7 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಳ್ಳಾರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಆಧರಿಸಿ ಬಾಲಕನೂ ಸೇರಿದಂತೆ ಐವರು ಬೈಕ್‌ಕಳ್ಳರನ್ನು ಬಂಧಿಸಿರುವುದಾಗಿಯೂ, ಇವರಿಂದ ₹4 ಲಕ್ಷ ಮೌಲ್ಯದ 9 ವಿವಿಧ ಬೈಕ್‌ಗಳನ್ನು ಜಪ್ತಿ ಮಾಡಿರುವುದಾಗಿಯೂ ಎಸ್ಪಿ ಹೇಳಿದ್ರು....
ವೀರೇಶ್ ನಾಯಕ ಎಲ್, ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ
PublicNext
29/01/2026 06:22 pm