ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ, ಯುಗಾದಿ ರಥೋತ್ಸವಕ್ಕೆ ಸಕಲ ಸಿದ್ಧತೆ !

ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 14 ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ಮಾರ್ಚ್ 16ರಿಂದ ಯುಗಾದಿ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

ಫೆಬ್ರವರಿ 14 ರಂದು ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗಲಿದೆ. 15ರಂದು ಸ್ವಾಮಿಗೆ ಎಣ್ಣೆಮಜ್ಜನ, ಜಾಗರಣೆ ಉತ್ಸವ, 16ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು, 17ರಂದು ಅಮಾವಾಸ್ಯೆ, ವಿಶೇಷ ಸೇವೆ ಉತ್ಸವಾದಿಗಳು ಹಾಗೂ 18 ರಂದು ಬೆಳಗ್ಗೆ 10.05 ರಿಂದ 11 ಗಂಟೆಯವರೆಗೆ ಮಹಾರಥೋತ್ಸವ ಪ್ರಾರಂಭವಾಗಲಿದ್ದು, ನಂತರ ಗುರುಬ್ರಹ್ಮೋತ್ಸವ ಹಾಗೂ ಅನ್ನಬ್ರಹ್ಮೋತ್ಸವ ಮತ್ತು ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ ಜರುಗಲಿದೆ.

ಮಾರ್ಚ್ 16 ರಂದು ಯುಗಾದಿ ಜಾತ್ರೆ ಆರಂಭವಾಗಲಿದೆ. 17ರಂದು ಸ್ವಾಮಿಗೆ ಎಣ್ಣೆಮಜ್ಜನ, ವಿಶೇಷ ಸೇವೆ ಉತ್ಸವಾದಿಗಳು, 18ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ಹಾಗೂ 19ರಂದು ಯುಗಾದಿ ಅಮವಾಸ್ಯೆ, ಬೆಳಗ್ಗೆ 9.45ರಿಂದ 11 ಗಂಟೆಯವರೆಗೆ ಚಾಂದ್ರಮಾನ ಯುಗಾದಿ ಮಹಾರಥೋತ್ಸವ, ನಂತರ ಗುರುಬ್ರಹ್ಮೋತ್ಸವ ಹಾಗೂ ಅನ್ನಬ್ರಹ್ಮೋತ್ಸವ ನಡೆಯಲಿದೆ ಎಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.

Edited By : PublicNext Desk
PublicNext

PublicNext

29/01/2026 06:31 pm

Cinque Terre

3.6 K

Cinque Terre

0

ಸಂಬಂಧಿತ ಸುದ್ದಿ