ಮೊಳಕಾಲ್ಮುರು : ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾತ್ರ ಸಮಾಜವನ್ನು ಮಾರಕವಾಗಿ ಕಾಡುತ್ತಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗಲಿದೆ ಎಂದು ತಹಶೀಲ್ದಾರ್ ಟಿ. ಜಗದೀಶ್ ಹೇಳಿದರು.ತಾಲ್ಲೂಕು ಕಚೇರಿಯಲ್ಲಿ ಗುರುವಾರ ನಡೆದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸುವ ನಿಟ್ಟಿನಲ್ಲಿ ಅನೇಕ ಕಾನೂನು ಕ್ರಮಗಳನ್ನು ಕೈಗೊಂಡಿದ್ದರೂ ಸಹ ಕೆಲವೆಡೆ ಪದ್ಧತಿ ಜೀವಂತವಾಗಿದೆ. ಇದರಿಂದ ಸದೃಢ ಸಮಾಜ ನಿರ್ಮಾಣ ಮತ್ತು ಕಡ್ಡಾಯ ಶಿಕ್ಷಣತೊಂದರೆಯಾಗುತ್ತಿದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಆಗಬಹುದಾದ ತೊಂದರೆಗಳು ಹಾಗೂ ಕೈಗೊಳ್ಳಲಿರುವ ಕಾನೂನು ಕ್ರಮಗಳ ಬಗ್ಗೆ, ಅಂಗಡಿ, ಮುಂಗಟ್ಟು, ಬೇಕರಿ, ಹೋಟೆಲ್, ಡಾಬಾ ಸೇರಿದಂತೆ ಸಾರ್ವಜನಿಕ ಸ್ಥಳಗಳ ಮಾಲೀಕರಲ್ಲಿ ಜಾಗೃತಿ ಮೂಡಿಸಿದಲ್ಲಿ ಮಾತ್ರ ಸಹಕಾರಿಯಾಗಲಿದೆ ಎಂದರು.
ಸಭೆಯಲ್ಲಿ ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ. ಸತೀಶ್ ಕುಮಾರ್. ವೃತ್ತ ಕಾರ್ಮಿಕ ಅಧಿಕಾರಿ ಟಿ. ಕುಸುಮಾ, ಮಕ್ಕಳ ಸಹಾಯವಾಣಿ ಸಂಯೋಜಕ ಚಂದನ ಸೇರಿದಂತೆ ಹಲವರಿದ್ದರು.
PublicNext
29/01/2026 07:11 pm
LOADING...