ಮಡಿಕೇರಿ: ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಆಟೋದಿಂದ ಹೊರಬಿದ್ದ ಆಟೋ ಚಾಲಕನ ಮೇಲೆ ಲಾರಿ ಹರಿದು ಆಟೋ ಚಾಲಕ ಮೃತಪಟ್ಟ ಭೀಕರ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಬಳಿ ನಡೆದಿದೆ.
ಕೊಡಗು ಜಿಲ್ಲೆಯ ಸಂಪಾಜೆ ಕಡೆಯಿಂದ ಆಟೋ ಚಡಾವು ಕಡೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಪಲ್ಟಿಯಾದ ಆಟೋದಿಂದ ಆಟೋ ಚಾಲಕ ಸುಂದರ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಆಟೋ ಚಾಲಕನ ಮೇಲೆ ಹರಿದಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆಟೋದಲ್ಲಿದ್ದ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಟೋಗೆ ಡಿಕ್ಕಿಪಡಿಸಿದ ಕಾರಿನ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
29/01/2026 08:03 pm
LOADING...