ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಸುರಕ್ಷತಾ ಜಾಗೃತಿಗೆ ಬೈಕ್ ಜಾಥಾ

ದಾವಣಗೆರೆ: ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಬೈಕ್ ಜಾಥಾ ಮಾಡಲಾಯಿತು.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿಗಾಗಿ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ರಸ್ತೆ ಸುರಕ್ಷತೆ ಸಂಚಾರ ನಿಯಮಗಳ ಪಾಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಪೊಲೀಸ್ ಅಧೀಕ್ಷಕರವರಾದ ಶ್ರೀಮತಿ ಉಮಾ ಪ್ರಶಾಂತ್ ರವರ ನೇತೃತ್ವದಲ್ಲಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್ಪಿ ಉಮಾ ಪ್ರಶಾಂತ್ ರವರು ಹಸಿರು ನಿಶಾನೆ ತೋರುವ ಮೂಲಕ ಬೈಕ್ ಜಾಥಕ್ಕೆ ಚಾಲನೆ ನೀಡಿದರು. ಬೈಕ್ ಜಾಥವು ನಗರದ ಜಯದೇವ ವೃತ್ತದಿಂದ ಆರಂಭವಾಗಿ ಲಾಯರ್ ರಸ್ತೆ- ಈರುಳ್ಳಿ ಮಾರ್ಕೆಟ್ ರಸ್ತೆ- ಬಂಬೂಬಜಾರ್- ವೆಂಕಟೇಶ್ವರ ವೃತ್ತ- ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಮುಕ್ತಾಯವಾಯಿತು.

ಈ ಸಂದರ್ಭದಲ್ಲಿ ಮಹಾ ನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ರೇಣುಕಾ, ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರುಗಳಾದ ಶ್ರೀ ಮಂಜುನಾಥ, ಶ್ರೀಮತಿ ಶೈಲಜಾ, ಶ್ರೀಮತಿ ಪ್ರಮೀಳಮ್ಮ, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Edited By : Nirmala Aralikatti
Kshetra Samachara

Kshetra Samachara

29/01/2026 08:13 pm

Cinque Terre

14.9 K

Cinque Terre

0