ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಕ್ಕಳ ತಟ್ಟೆ ವಿವಾದ : ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳ ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿರೋ ಪೈಪ್ ನಲ್ಲಿ ತೊಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಮಕ್ಕಳ ಊಟದ ತಟ್ಟೆಗಳನ್ನು ಕೊಳಚೆ ನೀರಿನಿಂದ ತೊಳೆಯಲಾಗುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಕೊಳಚೆ ನೀರಿನ ಬದಲಾಗಿ, ಫಿಲ್ಟರ್ ಯಂತ್ರದಿಂದ ಹೊರಹೋಗುವ ತ್ಯಾಜ್ಯ ನೀರನ್ನು ಪ್ರತ್ಯೇಕ ಪೈಪ್ ಮುಖಾಂತರ ತರಲಾಗಿದ್ದು, ಅದೇ ನೀರನ್ನು ತಟ್ಟೆ ತೊಳೆಯಲು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ ಆವರಣದಲ್ಲಿ ಮಕ್ಕಳ ಊಟದ ತಟ್ಟೆಗಳನ್ನು ತೊಳೆಯಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದ್ದು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಶಾಲೆಯಲ್ಲಿ ಮಕ್ಕಳಿಗೆ ಪ್ರತ್ಯೇಕ ಕುಡಿವ ನೀರಿನ ವ್ಯವಸ್ಥೆಯೂ ಲಭ್ಯವಿದೆ ಎಂದು ಪರಿಶೀಲನೆ ವೇಳೆ ತಿಳಿದುಬಂದಿದೆ.

ಈ ಸಂಬಂಧ ಸದರಿ ಶಾಲೆಯ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಮುಖ್ಯ ಶಿಕ್ಷಕರು ನೀಡುವ ಉತ್ತರ ಹಾಗೂ ಸ್ಥಳ ಪರಿಶೀಲನಾ ವರದಿ ಸಮೇತ ವಿಷಯವನ್ನು ಮೇಲಾಧಿಕಾರಿಗಳಿಗೆ ಕಳುಹಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ಬಸನ್ನವರ ತಿಳಿಸಿದ್ದಾರೆ.

Edited By : Manjunath H D
PublicNext

PublicNext

29/01/2026 09:14 pm

Cinque Terre

14.96 K

Cinque Terre

0

ಸಂಬಂಧಿತ ಸುದ್ದಿ