ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮದ ಮಾಂಜ್ರಾ ನದಿ ಪಾತ್ರದಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮರಳು ದಂಧೆಕೋರರು ಹಗಲು-ರಾತ್ರಿ ಎನ್ನದೆ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿದ್ದು, ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವನ್ನುಂಟು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅಕ್ರಮಗಳಿಗೆ ಕಡಿವಾಣ ಹಾಕುವ ಸಲುವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕಾರ್ಯಾಚರಣೆಯಲ್ಲಿ, ಅಕ್ರಮ ಮರಳು ಗಣಿಗಾರಿಕೆಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ನದಿ ಪಾತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬೃಹತ್ ಟ್ರೆಂಚ್‌ಗಳನ್ನು ನಿರ್ಮಿಸಲಾಗಿದೆ. ನಿಟ್ಟೂರು(ಬಿ) ಮತ್ತು ನಿಟ್ಟೂರು(ಕೆ) ಗ್ರಾಮಗಳಿಂದ ಮಾಂಜ್ರಾ ನದಿಗೆ ತಲುಪುವ ರಸ್ತೆಗಳಿಗೆ ಅಡ್ಡಲಾಗಿ ಜೆಸಿಬಿ ಯಂತ್ರಗಳ ಮೂಲಕ ಈ ಟ್ರೆಂಚ್‌ಗಳನ್ನು ನಿರ್ಮಿಸಲಾಗಿದೆ. ಇದೇ ಸಂದರ್ಭದಲ್ಲಿ, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಒಂದು ಟ್ರ್ಯಾಕ್ಟರ್ ಅನ್ನು ವಶಪಡಿಸಿಕೊಂಡು, ಅದರ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ.
PublicNext
29/01/2026 09:54 pm
LOADING...