ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ : ಹಂಪಿ ವೈಭವಕ್ಕೆ ಸಿದ್ಧತೆ: ಪೂರ್ವಭಾವಿ ಸಭೆಯಲ್ಲಿ ಮಹತ್ವದ ಚರ್ಚೆ!

ಹೊಸಪೇಟೆ : ಹಕ್ಕ ಬುಕ್ಕರ ನಾಡು, ಕಲಾ ಸಂಸ್ಕೃತಿಯ ಬಿಡು, ಶ್ರೀ ಕೃಷ್ಣದೇವರಾಯನ ಸಾಮ್ರಾಜ್ಯದ ನೆಲೆಬೀಡು, ತುಂಗೆಯ ದಡದಲ್ಲಿ ವಿರೂಪಾಕ್ಷೇಶ್ವರನ ಸನ್ನಿಧಿಯಾದ ಹಂಪಿಯಲ್ಲಿ ದಿನಾಂಕ ಫೆಬ್ರವರಿ 13.14 ಮತ್ತು 15 ರಂದು ನಡೆಯುವ ಹಂಪಿ ಉತ್ಸವದ ಪೂರ್ವಭಾವಿ ಸಭೆಯನ್ನು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಗುಡೇಕೋಟೆ ಉತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿದರು.

ಈ ಸಭೆಯಲ್ಲಿ ಮಾನ್ಯ ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಶ್ರೀ ಎಚ್ ಕೆ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ್ ಎಸ್ ತಂಗಡಗಿ, ಹಾಗೂ ವಸತಿ ಮತ್ತು ವಕ್ಫ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ತ್ರಿಲೋಕ ಚಂದ್ರ K.V, ಜೆ ಮಂಜುನಾಥ್, ಸರ್ಕಾರದ ಕಾರ್ಯದರ್ಶಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೆ ಎಮ್ ಗಾಯಿತ್ರಿ, ಮಾನ್ಯ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕವಿತಾ ಎಸ್ ಮನ್ನಿಕೇರಿ ಜಿಲ್ಲಾಧಿಕಾರಿಗಳು ವಿಜಯನಗರ ಜಿಲ್ಲೆ, ಅಕ್ರಂ ಷಾ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ವಿಜಯನಗರ ಜಿಲ್ಲೆ, ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ವಿಜಯನಗರ ಜಿಲ್ಲೆ, ವಿವೇಕಾನಂದ ಸಹಾಯಕ ಆಯುಕ್ತರು ವಿಜಯನಗರ ಜಿಲ್ಲೆ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

29/01/2026 10:33 pm

Cinque Terre

1.26 K

Cinque Terre

0

ಸಂಬಂಧಿತ ಸುದ್ದಿ