ಬೆಂಗಳೂರು: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ನಗರದ ಕೆ ಜಿ ರಸ್ತೆಯ ಕಂದಾಯ ಭವನ ಬಳಿ ತಡರಾತ್ರಿ 12.40ರ. ಸುಮಾರಿಗೆ ಘಟನೆ ನಡೆದಿದೆ. ಬೈಕ್ ಸವಾರ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ.
ಈ ವೇಳೆ ಸವಾರ ನಡು ರಸ್ತೆಯಲ್ಲಿ ಬಿದ್ದಿದ್ದು, ಇತರ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ದೌಡಾಯಿಸಿ ಸ್ಥಳೀಯರ ನೆರವಿನಿಂದ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನೂ ಬೈಕ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಅಪರಿಚಿತ ವಾಹನ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. ಕೆಜಿ ರಸ್ತೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿ ವಾಹನ ಪತ್ತೆ ಕಾರ್ಯ ನಡೆಸಿದ್ದಾರೆ. ಹಲಸೂರು ಗೇಟ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
30/01/2026 11:58 am
LOADING...