ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ದುರ್ಮರಣ

ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮರಣ ಹೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಮೇಶ ಭೀಮಪ್ಪ ಪೂಜೇರಿ (55) ಎಂದು ಗುರುತಿಸಲಾಗಿದೆ.‌ ಮೃತ ವ್ಯಕ್ತಿ ಕೆಲಸ ಮುಗಿಸಿಕೊಂಡು ಸಾಯಂಕಾಲ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮೂಡಲಗಿ- ಸುಣದೋಳಿ ರಸ್ತೆಯ ಮೇಲೆ ಅಪರಿಚಿತ ವಾಹನದ ಡಿಕ್ಕಿ ಹೊಡೆದಿದ್ದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ.‌

ಈ ಬಗ್ಗೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಕಲಂ:-281, 106(1), ಬಿಎನ್‌ಎಸ್ ಆಕ್ಟ್-2023 ಹಾಗೂ 134 ಸ.ಕ. 187 ಎಮ್ ವಿ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Edited By : Nirmala Aralikatti
Kshetra Samachara

Kshetra Samachara

30/01/2026 01:20 pm

Cinque Terre

3.86 K

Cinque Terre

0

ಸಂಬಂಧಿತ ಸುದ್ದಿ