ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೂಡ್ಲಿಗಿ : ಕಷ್ಟಪಟ್ಟು ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೇವು ಬೆಂಕಿಗೆ ಆಹುತಿ : ರೈತನಿಗೆ ಆಘಾತ!

ಕೂಡ್ಲಿಗಿ : ಸಂಗ್ರಹಿಸಿಟ್ಟಿದ್ದ ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ ಬಿದ್ದು ಧಗ ಧಗನೇ ಹೊತ್ತಿ ಉರಿದಿದೆ. ನಸುಕಿನ ಜಾವ ಬೆಂಕಿ ಹೊತ್ತಿಕೊಂಡ ಪರಿಣಾಮ ಹೊತ್ತಿ ಉರಿದು ಮೇವಿನ ಬಣವೆ ಸಂಪೂರ್ಣ ಭಸ್ಮ ಆಗಿದೆ‌. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಂಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರೈತ ರಾಮಣ್ಣ ಎನ್ನುವವರಿಗೆ ಸೇರಿದ್ದ ಮೇವಿನ ಬಣವೆ ಅಂತ ಗುರುತಿಸಲಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಆಗಬಾರದು ಎಂದು ಮೇವನ್ನ ರೈತ ಸಂಗ್ರಹಿಸಿಟ್ಟುಕೊಂಡಿದ್ದ. ಬೆಳಗಿನಜಾವ ಬೆಂಕಿ ತಗುಲಿ, ಮೇವಿನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಬಣವೆಯ ಪಕ್ಕದಲ್ಲೇ ಮನೆಗಳಿದ್ದ ಪರಿಣಾಮ ಕೆಲಕಾಲ ಆತಂಕ ಮನೆಮಾಡಿತ್ತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ ಆಗಿದೆ. ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

30/01/2026 03:38 pm

Cinque Terre

8.19 K

Cinque Terre

0

ಸಂಬಂಧಿತ ಸುದ್ದಿ