ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಬಳಿ ಬೆಳ್ಳಂಬೆಳಿಗ್ಗೆ ಅಪಘಾತ ಸಂಭವಿಸಿದೆ.
ಎರಡು ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂ ಆಗಿವೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಹಳೆ ಚಂದಾಪುರ ಕಡೆಯಿಂದ ವಿರುದ್ಧ ದಿಕ್ಕಿನಲ್ಲಿ ಬಂದಿರುವ ಕಾರುಗಳುಐದಾರು ಕಿಮೀ ಬಳಸಿ ಬರುವುದನ್ನು ತಪ್ಪಿಸಲು ಶಾರ್ಟ್ ಕಟ್ ಅನುಸರಿಸಿ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರುಗಳು ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ವೇಳೆ ಕಾರುಗಳನ್ನು ಮಾರು ದೂರ ಲಾರಿ ಎಳೆದು ಕೊಂಡು ಹೋದ ಘಟನೆ ನಡೆದಿದೆ ಅಪಘಾತದಿಂದ ಹೊಸೂರು ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕ್ರೇನ್ ಮೂಲಕ ಜಖಂಗೊಂಡ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
30/01/2026 03:45 pm
LOADING...