ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಗ್ರಾಮದಲ್ಲಿ, ಅರಣ್ಯ ಭೂಮಿ ಒತ್ತುವರಿ ಆರೋಪ ಎದುರಿಸುತ್ತಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬೆಂಗಳೂರಿನಲ್ಲಿ ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು, ಒತ್ತುವರಿ ಆರೋಪ ಸಂಬಂಧ ಅಗತ್ಯ ದಾಖಲೆ ಸಲ್ಲಿಸಲು, ಮತ್ತೆ ಒಂದು ತಿಂಗಳು ಕಾಲಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.
ಜಿನಗಲಕುಂಟೆ ಗ್ರಾಮದ ಸರ್ವೇ ನಂಬರ್ 1&2 ರಲ್ಲಿ 61.39 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪವಿದ್ದು, ಆ ಬಗ್ಗೆ 2011 ರಿಂದಲೂ ನ್ಯಾಯಾಂಗ ಹೋರಾಟ ನಡೆಯುತ್ತಿದೆ, ಆದರೆ ಅರಣ್ಯ ಸಂರಕ್ಷಣಾಧಿಕಾರಿ ಸಮಕ್ಷಮದಲ್ಲೆ ಕೇಸ್ ಇತ್ಯರ್ಥಕ್ಕೆ ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆ, ಒತ್ತುವರಿದಾರರಿಗೆ 64A ಅರಣ್ಯ ಕಾಯ್ದೆಯಡಿ ವಿಚಾರಣೆ ನಡೆಸಿ, ಎದುರುದಾರರ ದಾಖಲೆಗಳನ್ನ ಪರಿಶೀಲನೆಗೆ ನೋಟಿಸ್ ನೀಡಲಾಗಿತ್ತು, ಆದರೆ ದಾಖಲೆ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶವನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೇಳಿದ್ದು, ಒಂದು ವಾರದೊಳಗೆ ಅಗತ್ಯ ದಾಖಲೆ ಸಲ್ಲಿಕೆಗೆ, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
PublicNext
30/01/2026 04:24 pm
LOADING...