ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ: ಹಿಂದೂ ಸಮಾಜೋತ್ಸವದ ಬ್ಯಾನರ್ ಹರಿದ ಕಿಡಿಗೇಡಿಗಳು!

ಶೃಂಗೇರಿ: ಹಿಂದೂ ಸಮಾಜೋತ್ಸವಕ್ಕೆ ಹಾಕಿದ್ದ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಸಮೀಪದ ಬೋಳೂರು ಕ್ರಾಸ್ ಬಳಿ ನಡೆದಿದೆ.

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿಗಳು ಪಾಲ್ಗೊಳ್ಳಲಿರುವ ಈ ಕಾರ್ಯಕ್ರಮಕ್ಕಾಗಿ ಸಂಘಟಕರು ಕಳೆದ ರಾತ್ರಿ ಬ್ಯಾನರ್‌ಗಳನ್ನು ಅಳವಡಿಸಿದ್ದರು. ರಾತ್ರಿ ಸುಮಾರು 12:30ರವರೆಗೂ ಕಾರ್ಯಕರ್ತರು ಅದೇ ಸ್ಥಳದಲ್ಲಿದ್ದು, ಅವರು ಮನೆಗೆ ತೆರಳಿದ ನಂತರ ಬೆಳಗಿನ ಜಾವದ ಸಮಯದಲ್ಲಿ ದುಷ್ಕರ್ಮಿಗಳು ಬ್ಯಾನರ್‌ಗಳನ್ನು ಬ್ಲೇಡ್‌ನಿಂದ ಸೀಳಿ, ಕಟ್ಟಿದ್ದ ಹಗ್ಗಗಳನ್ನು ಬಿಚ್ಚಲು ಯತ್ನಿಸಿದ್ದಾರೆ.

ಇಂದು ಬೆಳಿಗ್ಗೆ ಈ ವಿಷಯ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Manjunath H D
PublicNext

PublicNext

30/01/2026 05:01 pm

Cinque Terre

6.61 K

Cinque Terre

0

ಸಂಬಂಧಿತ ಸುದ್ದಿ