ಬೀದರ್ ನಗರದಲ್ಲಿ ಕರ್ಕಶ ಶಬ್ಧ ಮಾಡುತ್ತಿದ್ದ ಬೈಕ್ ಸವಾರರಿಗೆ ಬೀದರ್ ಪೊಲೀಸರು ಬಿಸಿ ಮುಟ್ಟಿಸಿದ್ದು, ಸೈಲೆನ್ಸರ್ ಸೀಜ್ ಮಾಡಿ ಸಂಚಾರಿ ನಿಯಮ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ರಾಯಲ್ ಎನ್‌ಫೀಲ್ಡ್, ಬುಲೆಟ್ ವಾಹನಗಳಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುವ ರೀತಿಯಲ್ಲಿ ಕರ್ಕಶ ಶಬ್ಧ ಮಾಡಿ ತೊಂದರೆ ಕೊಡುತ್ತಿದ್ದ ಬೈಕ್ ಸವಾರರ ಬೈಕ್‌ಗಳನ್ನ ತಡೆದು ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನ ಕಿತ್ತು ಹಾಕಿ ದಂಡ ವಿಧಿಸಿದ್ದಾರೆ.
30ಕ್ಕೂ ಹೆಚ್ಚು ಬೈಕ್‌ಗಳ ಸೈಲೆನ್ಸರ್‌ಗಳನ್ನ ಸೀಜ್ ಮಾಡಿರುವ ಒಂದು ಸಾವಿರ ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಟ್ರಾಫಿಕ್ ಪೊಲೀಸರು ಮುಂದಿನ ದಿನಗಳಲ್ಲಿ ಈ ರೀತಿ ಕರ್ಕಶ ಶಬ್ಧ ಮಾಡುವ ಸೈಲೆನ್ಸರ್‌ಗಳನ್ನ ಬಳಸದಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಬೈಕ್ ಸವಾರರಿಗೆ ದಂಡ ವಿಧಿಸಿ ಸಂಚಾರಿ ನಿಯಮ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
PublicNext
30/01/2026 05:08 pm
LOADING...