ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಸಾಲಮನ್ನಾ ಮಾಡಬೇಕು : ರೈತ ಮುಖಂಡ ಮಲ್ಲಿಕಾರ್ಜುನ ಬಾಳನಗೌಡರ

ಧಾರವಾಡ: ಸಂಕಷ್ಟದಲ್ಲಿ ರೈತರ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಾಳನಗೌಡರ ತಿಳಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಅವರ ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಫಸಲ್ ಬಿಮಾ ಯೋಜನೆಯ ಅಡಿ ಪ್ರತಿ ತಿಂಗಳು ಎರಡು ಸಾವಿರ ಹಣ ವಿತರಣೆ ಮಾಡಬೇಕು ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಯಂತ್ರೋಪಕರಣಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಡಿಸೇಲ್ ಸಬ್ಸಿಡಿ ದರದಲ್ಲಿ ವಿತರಿಸುವ ಕಾರ್ಯ ಮಾಡಬೇಕು. ರೈತರ ಬೆಳೆದ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರೇಗೌಡ ಗಸ್ತಿ, ಮಾದೇವಪ್ಪ ಸೇರಿದಂತೆ ಇತರರಿದ್ದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/01/2026 05:12 pm

Cinque Terre

81.51 K

Cinque Terre

2

ಸಂಬಂಧಿತ ಸುದ್ದಿ