ಮಡಿಕೇರಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನಾಚರಣೆಯನ್ನು ಮಡಿಕೇರಿ ನಗರದಲ್ಲಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ಸ್ ಮತ್ತು ಗೈಡ್ಸ್, ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜತೆಯಲ್ಲಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದ ಪಕ್ಕದಲ್ಲಿನ ವೇದಿಕೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಗಾಂಧೀಜಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು.ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸರ್ವಧರ್ಮ ಪ್ರಾರ್ಥನೆ, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.
PublicNext
30/01/2026 05:17 pm
LOADING...