ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿಪಿ/ಟಿಎಸ್‌ಪಿ) ಉಪಯೋಜನೆಗಳ ಅನುಷ್ಠಾನದಲ್ಲಿ ವೇಗವರ್ಧನೆ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫೆಬ್ರವರಿ ಅಂತ್ಯದೊಳಗೆ ಈ ಯೋಜನೆಗಳ ಪ್ರಗತಿ ಸಾಧಿಸಬೇಕು ಮತ್ತು ಯಾವುದೇ ವಿಳಂಬವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.
ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ವಿವಿಧ ಇಲಾಖೆಗಳ ಕಾಮಗಾರಿ ನಡೆಯುವ ಸ್ಥಳಗಳಿಗೆ ತಾವೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್ ತಿಳಿಸಿದರು. ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿ, ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪೌರಕಾರ್ಮಿಕರ ಆರೋಗ್ಯ ತಪಾಸಣೆ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ಖಾಸಗಿ ಆಸ್ಪತ್ರೆಗಳಿಗೆ ಮನವಿ ಸಲ್ಲಿಸಿದರೆ ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
30/01/2026 05:49 pm
LOADING...