ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತಗೆ ಧಮ್ಮಿ ಹಾಕಿದ್ದ ಸ್ಥಳೀಯ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ. ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು ರಾಜೀವ್ ಗೌಡ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಇತ್ತೀಚೆಗೆ ಕೇರಳ ಗಡಿ ಭಾಗದಲ್ಲಿ ಬಂಧಿಸಲಾಗಿತ್ತು. ಸುಮಾರು 12 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇತ್ತೀಚೆಗೆ ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ರಾಜೀವ್ ಗೌಡ ಪರ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದರೆ, ಸರ್ಕಾರಿ ಪರ ಅಭಿಯೋಜಕ ಮೊಹಮ್ಮದ್ ಖಾಜಾ ಪ್ರತಿವಾದ ಮಂಡಿಸಿದರು.
ಚಿಕ್ಕತೇಕಹಳ್ಳಿ ಡಿ ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
30/01/2026 08:16 pm
LOADING...