ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು : ಬೈರಮಂಗಲ ವಲಯದ ಅಬ್ಬನಕುಪ್ಪೆ ಕಾರ್ಯಕ್ಷೇತ್ರದ ಜೋಗರ ದೊಡ್ಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಚಿಕ್ಕಣಯ್ಯರವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ, ಸ್ವ-ಉದ್ಯೋಗ, ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರೊಂದಿಗೆ ಅವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಆರೋಗ್ಯದ ಅರಿವು ಮೂಡಿಸುತ್ತಿದೆ. ಪೂಜ್ಯರು ಇನ್ನೂ ಹೆಚ್ಚು ಸೇವೆಗಳನ್ನು ಮಾಡಲಿ ಎಂದು ಆರೈಸಿದರು.

ಕಾರ್ಯಕ್ರಮದಲ್ಲಿ ಬಿಡದಿ ಪುರಸಭೆಯ ಅಧ್ಯಕ್ಷ ವೆಂಕಟೇಶ್‌, ಜಿಲ್ಲಾ ಜನಜಾಗೃತಿ ಸದಸ್ಯ ಮಂಜುನಾಥ್‌, ಐ ದೃಷ್ಟಿ ಆಸ್ಪತ್ರೆಯ ಮುಖ್ಯಸ್ಥ ಅನಿಲ್‌ ಕುಮಾರ್‌, ವಿಜಯ ಆಸ್ಪತ್ರೆಯ ಮುಖ್ಯಸ್ಥ ಡಾ.ಗಿರೀಶ್‌ ಭಾಗವಹಿಸಿದರು.

Edited By : Nirmala Aralikatti
PublicNext

PublicNext

30/01/2026 08:43 pm

Cinque Terre

7.31 K

Cinque Terre

0

ಸಂಬಂಧಿತ ಸುದ್ದಿ