ಚಿತ್ರದುರ್ಗ: ಭೀಮಸಮುದ್ರ ಗ್ರಾಮದ ಜೆ.ಎಸ್.ಡಬ್ಲ್ಯೂ ಕಂಪನಿಯಲ್ಲಿ ವಾಹನ ಡಿಕ್ಕಿಯಾಗಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗದ ಭೀಮಸಮುದ್ರ ಬಳಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನ ಕಂಪನಿಯ ಸೂಪರ್ವೈಸರ್ ಚಂದ್ರಶೇಖರ್ (48) ಎಂದು ಗುರುತಿಸಲಾಗಿದೆ.
ಘಟನೆ ನಡೆದ ಕೂಡಲೇ, ಕಂಪನಿ ಅಧಿಕಾರಿಗಳು ಮೃತರ ಕುಟುಂಬಕ್ಕೆ ಯಾವುದೇ ಮಾಹಿತಿ ನೀಡದೆ, ಚಂದ್ರಶೇಖರ್ ಅವರ ಮೃತದೇಹವನ್ನು ನೇರವಾಗಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿದ್ದು, ಮೈನಿಂಗ್ ಕಂಪನಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
30/01/2026 09:59 pm
LOADING...