ಬೆಂಗಳೂರು: ಉಸಿರುಗಟ್ಟಿ ಒಂದೇ ರೂಂನಲ್ಲಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ.
ಮುತ್ಸಂದ್ರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿದ್ದ ಜಯಂತ್ ಸಿಂಧೆ (25), ನೀರೇಂದ್ರನಾಥ್ ಟೈಡ್ ( 24), ಡಾಕ್ಟರ್ ಟೈಡ್ (25) ಧನಂಜಯ್ ಟೈಡ್ (20) ನಾಲ್ವರು ಅಂತರಾಜ್ಯ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಬಾಗಿಲು ಕಿಟಕಿ ಬಂದ್ ಮಾಡಿ ಮಲಗಿದ್ದ ನಾಲ್ವರು ಗ್ಯಾಸ್ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಮೂಡಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್, ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಸೀನ್ ಆಫ್ ಕ್ರೈಂ ತಂಡ ಕೂಡ ಸ್ಥಳ ಮಹಜರ್ ನಡೆಸಿದ್ದಾರೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡ ಸೂಲಿಬೆಲೆ ಪೋಲಿಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
PublicNext
31/01/2026 01:14 pm
LOADING...