ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಜ್ಯ ಕೈಮಗ್ಗ ನಿಗಮ ಆರ್ಥಿಕವಾಗಿ ಇನ್ನಷ್ಟು ಅಭಿವೃದ್ಧಿ ಆಗಬೇಕಿದೆ - ಬಿ.ನಾಗೇಂದ್ರ..!

ಹುಬ್ಬಳ್ಳಿ: ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ಇನ್ನಷ್ಟು ಆರ್ಥಿಕವಾಗಿ ಬಲಾಢ್ಯ ಹೊಂದಲು ಅನೇಕ ಯೋಜನೆ ಹಾಕಿಕೊಳ್ಳಲಾಗಿದೆ. ಈಗಾಗಲೇ ಕೈಮಗ್ಗ ನೇಕಾರರ ಸಮೀಕ್ಷೆ ಮಾಡಲಾಗಿದೆ. ಕೈಮಗ್ಗ ನೇಕಾರರಿಗೆ ಉತ್ತೇಜನ ಕೊಡಲು ಶೇಕಡಾ 10 ರಷ್ಟು ಕೂಲಿ ಹೆಚ್ಚಳ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್ ಹೇಳಿದರು.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮಾದರಿ ನಿಗಮ ಮಾಡಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಬಜೆಟ್ ನಲ್ಲಿ 75 ಕೋಟಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಹುಬ್ಬಳ್ಳಿ , ಬೆಂಗಳೂರು ಸೇರಿದಂತೆ ಬೇರೆ ಬೇರೆ ಕಡೆ ಇರುವ ಆಸ್ತಿ ಸಮೀಕ್ಷೆ ಸಹ ನಡೆಸಲಾಗಿದೆ. ಕೈಮಗ್ಗ ಅಭಿವೃದ್ಧಿ ನಿಗಮದ ಶಿಥಿಲ ವ್ಯವಸ್ಥೆಯಲ್ಲಿನ ಕಟ್ಟಡ ಮರು ನಿರ್ಮಾಣ ಮಾಡಲಾಗುವುದು. ಕಟ್ಟಡಗಳ ನವೀಕರಣ, ಸುಧಾರಣೆ ಬಗ್ಗೆ ಕಾಳಜಿ ವಹಿಸಲಾಗುತ್ತದೆ ಎಂದು ಅವರು ಹೇಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

31/01/2026 03:43 pm

Cinque Terre

25.14 K

Cinque Terre

0

ಸಂಬಂಧಿತ ಸುದ್ದಿ