ಶಿವಮೊಗ್ಗ : ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗದಿತ ವೇಳಾಪಟ್ಟಿಯಂತೆ ಬಸ್ಸುಗಳನ್ನು ಬಿಡಲು ಕ್ರಮ ವಹಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಧು ಹೆಚ್ ಎಂ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. 75 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಾಗಿಲಿಗೇ ಪಡಿತರ ತಲುಪಿಸುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಅನ್ನ ಸುವಿಧಾ ಯೋಜನೆಯನ್ನು ವೃದ್ದರಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ಗೆ ಪರಿವರ್ತನೆಯಾಗಿರುವ ಫಲಾನುಭವಿಗಳ ಕುರಿತು ಪರಿಶೀಲಿಸಿ, ಅರ್ಹರನ್ನು ಗುರುತಿಸಿ ಬಡವರಿಗೆ ನ್ಯಾಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
31/01/2026 05:05 pm
LOADING...