ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆಯಲ್ಲಿ ಶಾಸಕ ಟಿ.ರಘುಮೂರ್ತಿ ಅವರಿಂದ ಪಾದಯಾತ್ರೆ

ಚಳ್ಳಕೆರೆ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧಿ ಹೆಸರು ಬದಲಾವಣೆ ಮಾಡಿದ್ದನ್ನ ಖಂಡಿಸಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಲಾಗಿದೆ. ಕ್ಷೇತ್ರದ ದೊಡ್ಡೇರಿ ಗ್ರಾಮದಿಂದ ಆರಂಭವಾದ ಪಾದಯಾತ್ರೆ ಉಪ್ಪಾರಹಟ್ಟಿ, ನಗರಂಗೆರೆ, ಚಳ್ಳಕೆರೆ ವರೆಗೂ ಜರುಗಿದೆ.

ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು. ಈ ವೇಳೆ ಶಾಸಕರು ಗ್ರಾಮಗಳಿಗೆ ಎಂಟ್ರಿ ಕೊಡುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೂ ಮಾಲೆ ಹಾಕಿ, ಜೈಕಾರ ಹಾಕಿ ಸ್ವಾಗತಿಸಿದರು. ಈ ವೇಳೆ ಮಹಾತ್ಮ ಗಾಂಧಿ ಅವರ ಹೆಸರು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದರು.

Edited By : PublicNext Desk
Kshetra Samachara

Kshetra Samachara

31/01/2026 07:23 pm

Cinque Terre

680

Cinque Terre

0

ಸಂಬಂಧಿತ ಸುದ್ದಿ