ನಿಪ್ಪಾಣಿ -2 ಯೋಜನಾ ಕಚೇರಿ ವ್ಯಾಪ್ತಿಯ ಕಾರದಗ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯತ್ ಅಧ್ಯಕ್ಷ ಸ್ವಾತಿ ಅವಿನಾಶ್ ಕಾಂಬ್ಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಾವೀರ್ ಮಹಾವಿದ್ಯಾಲಯ ಕೊಲ್ಲಾಪುರದ ಉಪನ್ಯಾಸಕ ಪಾಟೀಲ್, ಸೌಭಾಗ್ಯವತಿ ಮನಾಲಿ, ಸುನಿಲ್ ಮಾನೆ, ಉಪನ್ಯಾಸಕ ಕೊಗನೊಳ್ಳಿ ಅವರು ಭಾಗವಹಿಸಿ ಜ್ಞಾನವಿಕಾಸ ಸದಸ್ಯರಿಗೆ ಮಾಹಿತಿ ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಬಾಳಾಸಾಬ್ ಸಿಂಧೆ, ಯೋಜನಾಧಿಕಾರಿಗಳಾದ ಸುಧಾ ನಾಯ್ಕ್, ಮಂಜುನಾಯ್ಕ್ ಸಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಲಕ್ಷ್ಮಿ ಮಗದುಮ್ ಅವರು, ಡಾ.ಡಿ. ಹೇಮಾವತಿ ಹೆಗ್ಗಡೆಯವರ ಕನಸಿನ ಕೂಸಾದ ಮಹಿಳಾ ಜ್ಞಾನವಿಕಾಸ ಕೇಂದ್ರಗಳು ಇಡೀ ನಮ್ಮ ರಾಜ್ಯದಲ್ಲಿ ಮಾದರಿಯಾಗಿ ಮಹಿಳೆಯರ ಸಬಲೀಕರಣದ ಕೆಲಸ ಮಾಡುತ್ತಿದೆ. ಮಹಿಳೆ ಕೇವಲ ಅಡುಗೆಮನೆ ಕೆಲಸ ಮಾಡಲಷ್ಟೇ ಅಲ್ಲ ಈ ಸಮಾಜದ ಸುಧಾರಣೆಯಲ್ಲಿ ಆಕೆಯ ಪಾತ್ರ ಬಹಳ ದೊಡ್ಡದು. ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಅಪಾರ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರು ಸಾಕಷ್ಟು ಅಭಿವೃದ್ಧಿ ಹೊಂದಿದ್ದಾರೆ ಎಂದು ಮಾತನಾಡಿದರು
ಸಂಪನ್ಮೂಲ ವ್ಯಕ್ತಿಗಳಾದ ಡಾ.ರೂಪಾಲಿ ಪಾಟೀಲ್ ಹಾಗೂ ಮನಾಲಿ ಮಾನೆಯವರು ಮಾತನಾಡಿ, ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರ ಸ್ಥಾನಮಾನ ಹಾಗೂ ಮಕ್ಕಳ ಪಾಲನೆ ಪೋಷಣೆಯಲ್ಲಿ ಹೆತ್ತವರ ಪಾತ್ರದ ಕುರಿತು ಮಹಿಳೆಯರಿಗೆ ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲಿಯಾನ್ ಮಾತನಾಡಿ, ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಯೋಜನೆಯ ಬಹುಮುಖ್ಯ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮದಲ್ಲಿ ಅನುಷ್ಠಾನಗೊಳಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಕೇಂದ್ರಗಳನ್ನು ಪ್ರಾರಂಭಿಸಿದ್ದಾರೆ. ಹತ್ತು ಹಲವಾರು ಕಾರ್ಯಕ್ರಮಗಳನ್ನ ಗ್ರಾಮೀಣ ಭಾಗದ ಜನರಿಗೆ ಮಾಹಿತಿ ಸುಲಭವಾಗಿ ಸಿಗುವಂತೆ ಅವಕಾಶ ಮಾಡಿ ಕೊಟ್ಟಿದ್ದಾರೆ.ಪ್ರತಿಯೊಂದು ಕೇಂದ್ರದ ಸದಸ್ಯರು ಈ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಸಮಾಜದಲ್ಲಿ ಮಾದರಿಯಾಗಿ ಹೆಣ್ಣುಮಕ್ಕಳು ಮುಂದೆ ಬರಬೇಕು ಎಂದು ತಿಳಿಸಿದರು.
ಧಾರವಾಡ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ, ಸುಧಾ ನಾಯ್ಕ್ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ರೂಪರೇಷೆಗಳು ವಾತ್ಸಲ್ಯ ಕಾರ್ಯಕ್ರಮಗಳ ಅಡಿಯಲ್ಲಿ ನಡೆಯುವ ಅನೇಕ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು
ಕೃಷಿ ಮೇಲ್ವಿಚಾರಕ ಮಂಜುನಾಥ ನಿರೂಪಿಸಿದರು. ಕು. ಜ್ಯೋತಿ ಸ್ವಾಗತಿಸಿದರು.
Kshetra Samachara
31/01/2026 10:47 pm