ಬೆಳಗಾವಿ: ಸಮಾಜದಲ್ಲಿನ ಡಾಂಭಿಕ ಜೀವನ, ಮೂಢನಂಬಿಕೆ ಹಾಗೂ ಕಂದಾಚಾರಗಳನ್ನು ನೇರವಾಗಿ ಖಂಡಿಸಿ ವಚನಗಳ ಸತ್ಯದರ್ಶನ ಮಾಡಿಸಿದ ಅಂಬಿಗರ ಚೌಡಯ್ಯ ನಿಷ್ಠುರವಾದಿ ಶರಣರಾಗಿದ್ದರು. ಚೌಡಯ್ಯನವರು, ತಮ್ಮ ವಚನಗಳ ಮೂಲಕ ಜಾತಿ ಭೇದ, ಅಸಮಾನತೆ ಹಾಗೂ ಶೋಷಣೆಯ ವಿರುದ್ಧ ಧ್ವನಿ ಎತ್ತಿದ ವಚನಕಾರರು ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಶನಿವಾರ (ಜ.31) ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಉತ್ಸವ-2026ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನೇರವಾಗಿ ಖಂಡಿಸುವುದೇ ಕಷ್ಟವಾಗಿತ್ತು. ಅಂತಹ ಸಮಯದಲ್ಲಿ ಅಂಬಿಗರ ಚೌಡಯ್ಯ ಸೈದ್ಧಾಂತಿಕ ನಿಲುವಿನೊಂದಿಗೆ ನಿಷ್ಠುರವಾಗಿ ಮಾತನಾಡುತ್ತಿದ್ದರು. ಹೀಗಾಗಿ ಅವರು ಸತ್ಯನಿಷ್ಠ ಶರಣರು' ಎಂದರು. ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಅದ್ದೂರಿಯಾಗಿ ಆಚರಿಸುತ್ತಿರುವುದು ಸಂತಸದ ವಿಷಯ. ಸಮಾಜದ ಏಳಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಸಮಾಜ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲ ರೀತಿಯಲ್ಲಿ ಬೆಳೆಯುವ ನಿಟ್ಟಿನಲ್ಲಿ ಸಮಾಜದ ಅಭಿವೃದ್ಧಿಗೆ ಬಂಧುಗಳು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು
ವಚನ ಸಾಹಿತ್ಯದಲ್ಲಿ ಇಷ್ಟು ವಚನಕಾರರು ಇದ್ದರೂ ಸಹ ಕೆಲವು ಅಂಬಿಗರ ಚೌಡಯ್ಯನವರಿಗೆ ಮಾತ್ರ ನಿಜ ಶರಣ ಎಂಬ ಹೆಸರು ಬಂದಿದೆ. ಶರಣ ಚಳವಳಿಯ ಭಾಗವಾಗಿ ಅವರು ವಚನ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಸರಳ ಜೀವನ, ಸತ್ಯನಿಷ್ಠೆ ಮತ್ತು ಮಾನವೀಯ ಮೌಲ್ಯಗಳನ್ನೇ ಧರ್ಮವೆಂದು ಬೋಧಿಸಿದರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿ ತೋರಿಸುವ ದೀಪಗಳಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ತಿಳಿಸಿದರು
ಕಾರ್ಯಕ್ರಮಕ್ಕೂ ಮುಂಚೆ ಅಶೋಕ ವೃತ್ತದಿಂದ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಚಾಲನೆ ನೀಡಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರು ವಿದ್ಯಾವತಿ ಭಜಂತ್ರಿ, ಕೋಳಿ-ಬೆಸ್ತ ಸಮಾಜದ ಜಿಲ್ಲಾ ಅಧ್ಯಕ್ಷ ಶ್ರೀ ದಿಲೀಪಕುಮಾರ ಕುರಂದವಾಡ ಉಪಸ್ಥಿತರಿದ್ದರು.
ಮೆರವಣಿಗೆ ಚನ್ನಮ್ಮ ವೃತ್ತದ ಮಾರ್ಗವಾಗಿ ಕೊಲ್ಲಾಪುರ ಸರ್ಕಲ್‌ನಿಂದ ಕುಮಾರ ಗಂಧರ್ವ ರಂಗ ಮಂದಿರದವರೆಗೆ ತಲುಪಿತು. ಮೆರವಣಿಗೆಯಲ್ಲಿ ಯಕ್ಷಗಾನ ಮತ್ತು ಡೊಳ್ಳು ಕುಣಿತ ಹಾಗೂ ವೇಷದಾರಿ ಪ್ರದರ್ಶನ ಜೊತೆಗೆ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ಅತಿ ವಿಜೃಂಭಣೆಯಿಂದ ಸಾಗಿತು.
Kshetra Samachara
31/01/2026 10:53 pm