ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಶಾಲನಗರದಲ್ಲಿ ಎಸ್ಪಿ ಬಿಂದುಮಣಿ ಜನ ಸಂಪರ್ಕ ಸಭೆ

ಕುಶಾಲನಗರ; ಜನಸಾಮಾನ್ಯರ ಸಮಸ್ಯೆ ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ. ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು. ಜನಸಂಪರ್ಕ ಸಭೆ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿಂಧುಮಣಿ ಹೇಳಿದರು.

ಪಟ್ಟಣದ ರೈತ ಸಹಕಾರ ಭವನದ ಸಭಾಂಗಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಉತ್ತರಿಸಿದರು. ಜನ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 150 ಕ್ಕೂ ಅಧಿಕ ಮಂದಿ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಕುಂದು ಕೊರತೆಗಳ ಬಗ್ಗೆ ಚರ್ಚಿಸಿದರು. ಪಾರ್ಕಿಂಗ್ ಸಮಸ್ಯೆ, ಅಡ್ಡಾದಿಡ್ಡಿ ವಾಹನ ಚಾಲನೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ತಿಳಿಸಿದರು. ಜಿ.ಎಂ.ಪಿ‌. ಶಾಲಾವರಣದಲ್ಲಿ ಕೆಲವು ಮಾದಕ ವ್ಯಸನಿಗಳು ಹಾಗೂ ಮದ್ಯಪಾನದಂತಹ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದರಿಂದ ಮಕ್ಕಳಿಗೆ ತೊಂದರೆ ಎದುರಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೆಲವರು ಮನವಿ ಮಾಡಿದರು.

ಪಟ್ಟಣದ ಪ್ರಮುಖ ಸರ್ಕಲ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದನ್ನು ಜಾರಿಗೊಳಿಸಬೇಕು. ಅಧಿಕೃತ ಪರವಾನಗಿ ಇಲ್ಲದ ಪಡ್ಡೆ ಹುಡುಗರು ಬೇಕಾ ಬಿಟ್ಟಿ ವಾಹನ ಚಲಾಯಿಸುತ್ತಿದ್ದಾರೆ. ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾಹನಗಳನ್ನು ಅಡ್ಡ-ದಿಡ್ಡಿಯಾಗಿ ನಿಲ್ಲಿಸುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ವ್ಯತ್ಯಯ ಉಂಟಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಯ ಪ್ರಮುಖರು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲರ ಅಹವಾಲು ಹಾಗೂ ಸಮಸ್ಯೆಗಳನ್ನ ಆಲಿಸಿದ ಪೊಲೀಸ್ ವರಿಷ್ಠಾಧಿಕಾರಿಗಳು ಸಾಧ್ಯವಾದಷ್ಟು ಸಮಸ್ಯೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

01/02/2026 07:12 am

Cinque Terre

440

Cinque Terre

0

ಸಂಬಂಧಿತ ಸುದ್ದಿ