ಮಡಿಕೇರಿ:ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಜಾಲ ಎಲ್ಲಡೆ ಕೇಳಿ ಬರುತ್ತಿದ್ದು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ.
ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಕೆಟ್ಟ ಪರಿಣಾಮ ಕುರಿತು ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲು ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
Kshetra Samachara
01/02/2026 07:17 am
LOADING...