ಚಿತ್ರದುರ್ಗ: ಬೆಸ್ಕಾಂ ಸೆಕ್ಷನ್ ಆಫೀಸರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಾಡದಕೆರೆಯಲ್ಲಿ ಘಟನೆ ನಡೆದಿದೆ.
ಮಾಡದ ಕೆರೆ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ಸೆಕ್ಷನ್ ಆಫೀಸರ್ ಮಧು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅವರು ಟ್ರಾನ್ಸ್ ಫಾರ್ಮರ್ ಬದಲಿಸಲು ನಾಗಯ್ಯನಹಟ್ಟಿಯ ರಾಮಚಂದ್ರ ಅವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಂದು 3000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ
Kshetra Samachara
01/02/2026 11:18 am
LOADING...