ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಲ್ಲಿಸಿದ್ದ ಬೈಕ್‌ಗೆ ಡಿಕ್ಕಿ, ಚಿಕಿತ್ಸೆ ಫಲಿಸದೆ ಸಾವು: ಬೆಳಗಾವಿಯಲ್ಲಿ ರಸ್ತೆ ಅಪಘಾತದ ದುರಂತ

ಬೆಳಗಾವಿ: ಬೈಕ್ ನಿಲ್ಲಿಸಿ ರಸ್ತೆ ಬದಿಗೆ ನಿಂತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಬೈಕ್ ಸವಾರ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗನೂರು ಗ್ರಾಮದ ಬಳಿ ನಡೆದ ಘಟನೆ ನಡೆದಿದ್ದು, ಈ ಅಪಘಾತದಲ್ಲಿ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಬಾಲಪ್ಪ ನಾಗಪ್ಪ ಉಳ್ಳಿಗೇರಿ (63) ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡ ಬಾಲಪ್ಪ ಅವರನ್ನು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By :
PublicNext

PublicNext

01/02/2026 01:16 pm

Cinque Terre

15.49 K

Cinque Terre

0

ಸಂಬಂಧಿತ ಸುದ್ದಿ