ಹಿರಿಯೂರು:ತಾಲ್ಲೂಕಿನ ವಾಣಿವಿಲಾಸ ಪುರದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಿಸುವ ಸಲುವಾಗಿ ಸುತ್ತಮುತ್ತಲ ಐದು ಹಳ್ಳಿಗಳ ಶಾಲೆಗಳನ್ನು ಮುಚ್ಚುತ್ತಿರುವ ಪ್ರಕ್ರಿಯೆ ಖಂಡಿಸಿ ಶನಿವಾರ ಭರಮಗಿರಿ ಮತ್ತು ಕಕ್ಕಯ್ಯನಹಟ್ಟಿ ಗ್ರಾಮಸ್ಥರು ಎಐಡಿಎಸ್‌ಒ ನೇತೃತ್ವದಲ್ಲಿ ಶಾಲೆಗಳ ಮುಂದೆ ಪ್ರತಿಭಟನೆ ನಡೆಸಿದರು.
ಪ್ರಾಣ ಕೊಟ್ಟೇವು, ಶಾಲೆ ಮುಚ್ಚಲು ಬಿಡುವುದಿಲ್ಲ' ಎಂಬ ಘೋಷಣೆ ಕೂಗಿದ ಪೋಷಕರು, ವಿದ್ಯಾರ್ಥಿಗಳು ಸರ್ಕಾರದ ಅವೈಜ್ಞಾನಿಕ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
'ಪ್ರತಿ ಹಳ್ಳಿಗೂ ಶಾಲೆ ಅವಶ್ಯ. ಒಂದು ಮಗುವಿದ್ದರೂ ಶಾಲೆ ನಡೆಸುತ್ತೇವೆ ಎಂದು ಶಿಕ್ಷಣ ಸಚಿವರು ಹೋದಲ್ಲೆಲ್ಲ ಹೇಳುತ್ತಿದ್ದಾರೆ. ಆದರೆ ಇಲ್ಲಿ ನೋಡಿದರೆ 5 ಕಿ.ಮೀ ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗೆ ಸೇರಿಸಬೇಕೆಂದು ಆದೇಶ ಹೊರಡಿಸಿದ್ದಾರೆ. ಇದು ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡವರು, ಕೂಲಿಕಾರರ ಮಕ್ಕಳಿಗೆ ಎಸಗುತ್ತಿರುವ ವಿಶ್ವಾಸದ್ರೋಹ' ಎಂದು ಎಐಡಿಎಸ್‌ಒ ಚಿತ್ರದುರ್ಗ ಜಿಲ್ಲಾ ಸಂಘಟನಕಾರ ಮಹಾಂತೇಶ ಬಿಳೂರ್ ಬೇಸರ ಹೊರಹಾಕಿದರು.
Kshetra Samachara
01/02/2026 02:12 pm
LOADING...