ಚಾಮರಾಜನಗರ : ಮಾಘ ಮಾಸದ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ಇರುವ ವಿಷ್ಣು ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.
ಚಾಮರಾಜನಗರದ ಶ್ರೀ ಕಾಡು ನಾರಾಯಣ ಸ್ವಾಮಿ ದೇವಸ್ಥಾನ, ಬಿಳಿಗಿರಿರಂಗನಬೆಟ್ಟ ದಲ್ಲಿ ಬಿಳಿಗಿರಿರಮನಗನಾಥಸ್ವಸಮಿ ದೇವಸಗೃಅನ, ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಸಮೀಪದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇಗುಲದಲ್ಲಿ ದೇವರಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜಾಕಾರ್ಯ ನೆರವೇರಿತು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ದೇವರ ದರ್ಶನಪಡೆದು ಪುನೀತರಾದರು. ವಿಶೇಷ ಪೂಜಾ ಕಾರ್ಯ ನೆರವೇರಿದ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
Kshetra Samachara
01/02/2026 03:50 pm
LOADING...