ಚಾಮರಾಜನಗರ: ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ. ಇದೊಂದು ರೈತರ ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಆಗಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಬೆಳೆದ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಕಾಯ್ದೆಯ ಜಾರಿ ಬಗ್ಗೆ ಕ್ರಮ ಕೈಗೊಂಡಿಲ್ಲ.ಎಂ.ಎಸ್ ಸ್ವಾಮಿ ನಾಥನ್ ವರದಿ ಜಾರಿಯ ಬಗ್ಗೆ ಕ್ರಮ ಕೈಗೊಂಡಿಲ್ಲ. ರೈತರ ಸಾಲ ಮನ್ನದ ಪ್ರಸ್ತಾಪವಿಲ್ಲ. ಕೃಷಿ ಸಾಲದ ನೀತಿ ರೈತನ ಹೊಲದಲ್ಲಿನ ಕಬ್ಬಿನ ದರದ ಬಗೆ ಪ್ರಸ್ತಾಪವಿಲ್ಲ. ರೈತರಬೆಳೆ ವಿಮೆ ನೀತಿಯು ವೈಯಕ್ತಿಕ ವಿಮೆ ರೀತಿ ಜಾರಿಗೆ ತರಬೇಕಾಗಿತ್ತು, ರೈತರ ಕೃಷಿ ಉತ್ಪನ್ನಗಳನ್ನು ವರ್ಷ ಪೂರ್ತಿ ಖರೀದಿ ಕೇಂದ್ರಗಳ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ. ಎಲ್ಲ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಬೆಲೆ ಕುಸಿತವಾದಾಗ ಖರೀದಿ ಮಾಡುವ ಯೋಜನೆಯನ್ನು ಪ್ರಕಟಣೆ ಮಾಡಿಲ್ಲ.ಕೇವಲ ತೆಂಗು, ಗೋಡಂಬಿ, ಶ್ರೀಗಂಧ ಬೆಳೆಗೆ ಮಾತ್ರ ವಿಶೇಷ ಗಮನಹರಿಸಿ, ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
PublicNext
01/02/2026 05:05 pm
LOADING...