ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತುರುವನೂರು ಹೋಬಳಿಯ ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ 2024–25ನೇ ಸಾಲಿನ ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲಾದ ಶ್ರೀ ಚೌಡೇಶ್ವರಿ ದೇವಿಯ ನೂತನ ದೇವಸ್ಥಾನವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಭಕ್ತಿಭಾವ ಮತ್ತು ವಿಜೃಂಭಣೆಯಿಂದ ಉದ್ಘಾಟಿಸಲಾಯಿತು.
ಉದ್ಘಾಟನಾ ಸಮಾರಂಭದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ಅವರು ಮಾತನಾಡಿ, ಗುಡಿ-ಗುಂಡಾರಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ.
ಇಂದಿನ ಯುವ ಪೀಳಿಗೆ ಅಧ್ಯಾತ್ಮದ ಕುರಿತು ಚಿಂತಿಸಿ, ಎಲ್ಲ ಸಮುದಾಯಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
Kshetra Samachara
01/02/2026 05:22 pm
LOADING...